ಇತ್ತೀಚಿನ ಸುದ್ದಿ
ಅವಧಿ ಮೀರಿ ಪಾರ್ಟಿ: ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ; 100 ಮಂದಿ ವಶಕ್ಕೆ
04/09/2022, 20:32
ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಅವಧಿಗೆ ಮೀರಿ ಪಾರ್ಟಿ ಮಾಡಿದ ಆರೋಪದ ಮೇಲೆ ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 100 ಮಂದಿಯನ್ನು ವಶಕ್ಕೆ ಪಡೆದಿದೆ.
ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿರುವ ಹೋಟೆಲ್ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪಾರ್ಟಿ ನಡೆಯುತ್ತಿತ್ತು. ಎಸಿಪಿ ರೀನಾ, ಇನ್ಸ್ಪೆಕ್ಟರ್ ಗೋವಿಂದರಾಜು ತಂಡದಿಂದ ದಾಳಿ ಮಾಡಿದೆ.
ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಕಳೆದ ಎರಡು ವೀಕೆಂಡ್ನಿಂದ ಒವರ್ ಟೈಮ್ ಪಾರ್ಟಿ ನಡೆಯುತ್ತಿದೆ ಎಂದು ಸಿಸಿಬಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳಿಂದ ದಾಳಿ ಮಾಡಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.