6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ  ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ: ಸಚಿವ ಸುನಿಲ್‌ ಕುಮಾರ್

05/09/2022, 18:47

ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ.

ಮಾರ್ಗಸೂಚಿಗಳನ್ನು ನೀಡಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಫಲಾನುಭವಿಗಳ ಆಯ್ಕೆಗಾಗಿ ನಿಗದಿಪಡಿಸಲಾಗಿದ್ದ ಕೆಲವು ಮಾನದಂಡಗಳನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದ್ದು, ಈ ಕಾರಣದಿಂದ ಸುತ್ತೋಲೆ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು