1:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ.38.03 ಲಕ್ಷ ರೂ. ಮೌಲ್ಯದ ಆಹಾರ ಕಿಟ್, ವೈದ್ಯಕೀಯ ಪರಿಕರ, ಪಿಪಿಇ ಕಿಟ್, ಸ್ಯಾನಿಟೈಸರ್ ವಿತರಣೆ

26/06/2021, 08:11

ಮಂಗಳೂರು(reporterkarnataka news): ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ ತಿಂಗಳ ಆರಂಭದಿಂದ ಇದುವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ಕಿಟ್ ಹಾಗೂ ಉಭಯ ಜಿಲ್ಲೆಗಳಿಗೆ ವೈದ್ಯಕೀಯ ಪರಿಕರ, ಬಡವರಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ ಮಾಸ್ಕ್, ಸ್ಯಾನಿಟೈಸರ್ , ಪಿಪಿಇ ಕಿಟ್, ಗ್ಲೌಸ್ ವಿತರಿಸಲು ಒಟ್ಟು 38.03 ಲಕ್ಷ ರೂ. ವ್ಯಯಿಸಲಾಗಿದೆ

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಉಭಯ ಜಿಲ್ಲೆಗಳ ಬಡ ಕುಟುಂಬಗಳಿಗೆ 1538 ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ 6.16 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಸೇವಾ ಭಾರತಿಗೆ 45 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್  ಮತ್ತು ಮಾಸ್ಕ್ ನೀಡಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಕರ್ತವ್ಯದಲ್ಲಿದ್ದ ಸುಮಾರು 100 ಮಂದಿ ಪೊಲೀಸರಿಗೆ ಟೀ ಮತ್ತು ಫಲಾಹಾರ ಒದಗಿಸಲಾಗಿದೆ. 45 ಮಂದಿ  ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಮಂಗಳೂರು ಟ್ರಾಫಿಕ್ ಪೊಲೀಸರಿಗೆ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಸೀಲ್ಡ್ ನೀಡಲಾಗಿದೆ. 18 ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 13,47,441 ರೂ. ವ್ಯಯಿಸಲಾಗಿದೆ.

ಈ ಎಲ್ಲ ಸೇವಾ ಕಾರ್ಯಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಒಟ್ಟು 38,03,412 ರೂ. ಖರ್ಚುಮಾಡಲಾಗಿದೆ.

ಈ ಎಲ್ಲ ಸೌಲಭ್ಯ ವಿತರಣೆ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು