ಇತ್ತೀಚಿನ ಸುದ್ದಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ರಾಷ್ಟ್ರೀಯ ತನಿಖಾ ದಳದಿಂದ ಹಲವೆಡೆ ದಾಳಿ
06/09/2022, 11:38
ಮಂಗಳೂರು(ReporterKarnataka.com):ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಹಾಗೂ ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಬೆಳಿಗ್ಗೆ 6 ಗಂಟೆಯಿಂದಲೇ ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದ್ದು, ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.