2:50 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ವಿದಾಯ: 13 ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೆಗ್ಗಳಿಕೆ

06/09/2022, 21:26

ಮುಂಬೈ(reporterkarnataka.com):
ಟೀಂ ಇಂಡಿಯಾ ಆಟಗಾರ‌ ಸುರೇಶ್ ರೈನಾ ಎಲ್ಲ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಗುಡ್​ಬೈ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಅವರು ಘೋಷಣೆ ಮಾಡಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ.

ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

13 ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​ ಪಂದ್ಯಗಳು, 226 ಏಕದಿನ ಪಂದ್ಯ ಹಾಗೂ 78 ಟಿ-20 ಪಂದ್ಯಗಳನ್ನ ಆಡಿದ್ದಾರೆ. ಮಾತ್ರವಲ್ಲ, ಟೀಂ ಇಂಡಿಯಾವನ್ನು ಮುನ್ನೆಡಿಸಿ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಕಳೆದ ಬಾರಿಯ ಐಪಿಎಲ್​ನಲ್ಲಿ ರೈನಾರನ್ನ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು