ಇತ್ತೀಚಿನ ಸುದ್ದಿ
ಬೆಂಗಳೂರು: ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಐಟಿ ದಾಳಿ; ದಾಖಲೆ ಪರಿಶೀಲಿಸಿದ ಅಧಿಕಾರಿಗಳು
07/09/2022, 13:32
ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆ ಸಮೂಹದ ಮೇಲೆ ಬುಧವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೆರಿಗೆ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಆದಾಯ ತೆರಿಗೆ ಅಧಿಕಾರಿಗಳು ಇಂದು ಬೆಳಗ್ಗೆ 6:30ರ ಸುಮಾರಿಗೆ ಏಕಕಾಲಕ್ಕೆ ನಗರದ 10ಕ್ಕೂ ಅಧಿಕ ಮಣಿಪಾಲ್ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಎಚ್ ಎಎಲ್ ಬಳಿಯಿರೋ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6:30ಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ನಡುವೆ ಉಡುಪಿಯಲ್ಲಿರುವ ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗಕ್ಕೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.