4:35 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

6.98 ಕೋಟಿ ರೂ.ಗಳ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಂಕುಸ್ಥಾಪನೆ

07/09/2022, 23:29

ಮಂಗಳೂರು(reporterkarnataka.com): ಮಂಗಳೂರಿನ ಅಭಿವೃಧ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಕೋಟ್ಯಂತರ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿವೆ ಎಂದು ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಹೇಳಿದರು.

ಅವರು ಬುಧವಾರ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ 56ನೇ ಮಂಗಳದೇವಿ ವಾರ್ಡಿನಲ್ಲಿ ಮಂಗಳಾ ದೇವಿ ಬಸ್ ಟರ್ಮಿನಲ್, ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ನಗರ ಪಾಲಿಕೆ ಸಿಬ್ಬಂದಿಗಳಿಗೆ ನೂತನ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗಳಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.

ಅಂತಾರಾಷ್ಟ್ರೀಯ ನಗರವಾಗಿರುವ ಮಂಗಳೂರಿನ ಅಭಿವೃದ್ದಿಗೆ ಸರ್ಕಾರಗಳು ಬದ್ದವಾಗಿವೆ. ಈ ದಿಸೆಯಲ್ಲಿ ನಗರಕ್ಕೆ ಅಗತ್ಯವಿರುವ ಸಾಕಷ್ಟು ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನ ಮಾಡಲಾಗುತ್ತಿದೆ, ಮಂಗಳಾದೇವಿ ದೇವಸ್ಥಾನದ ಮುಖ್ಯರಸ್ತೆ ಬದಿಯಲ್ಲಿ ಬಸ್‍ಗಳು ನಿಲ್ಲುವುದರಿಂದ ಓಡಾಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ನಗರಪಾಲಿಕೆ ಸಿಬ್ಬಂದಿಗಳ ವಸತಿಗೃಹ ಹಳೆಯದಾಗಿದ್ದು ವಾಸಿಸಲು ಕಷ್ಟವಾಗುತ್ತದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ವೈದ್ಯ ಚಿಕಿತ್ಸಾಲಯಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಆದ್ದರಿಂದ 4. 98 ಕೋಟಿ ರೂ.ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ವೈದ್ಯ ಚಿಕಿತ್ಸಾಲಯ ಮತ್ತು ಬಸ್ ಟರ್ಮಿನಲ್ ಮತ್ತು 2 ಕೋಟಿ ರೂ.ಗಳಲ್ಲಿ ನಗರ ಪಾಲಿಕೆ ಸಿಬ್ಬಂದಿಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದವರು ಹೇಳಿದರು.


ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಮುಖಂಡರಾದ ರವಿಶಂಕರ್ ಮೀಜಾರು, ನಿತಿನ್ ಕುಮಾರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸ್ಥಳೀಯರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು