ಇತ್ತೀಚಿನ ಸುದ್ದಿ
ಕೊಡಗು, ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ
08/09/2022, 19:28
ಬೆಂಗಳೂರು(reporterkarnataka.com): ಕೊಡಗು ಮತ್ತು ಹಾಸನ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ.
ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಗುರುವಾರದಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಹಾಸನ, ಧಾರವಾಡ, ಬೆಳಗಾವಿ, ಯಾದಗಿರಿ, ಉತ್ತರ ಕನ್ನಡ, ಗದಗ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.