10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು: ದಾಖಲೆಗಳಿಲ್ಲದೆ 76 ಲಕ್ಷ ನಗದು, 3 ಮೊಬೈಲ್ ಸಿಸಿಬಿ ಪೋಲಿಸ್ ವಶಕ್ಕೆ; 3 ಮಂದಿ ಬಂಧನ

08/09/2022, 21:32

ಬೆಂಗಳೂರು(reporterkarnataka.com): ದಾಖಲೆ ಇಲ್ಲದ 76 ಲಕ್ಷ ರೂ.ವನ್ನು ವಶಪಡಿಸಿಕೊಂಡಿರುವ ಸಿಸಿಬಿ ಪೊಲೀಸರು 3 ಮಂದಿಯನ್ನು ಬಂಧಿಸಿದ್ದಾರೆ.

ಗುಜರಾತ್ ಮೂಲದ ರಾಬಿನ್ ಕುಮಾರ್(26), ರಾಜಸ್ಥಾನದ ಸುಂದರ್‍ಲಾಲ್(39) ಮತ್ತು ಬೆಂಗಳೂರಿನ ಸುದಾಮ ನಗರದ ಸಿಕೆಸಿ ಗಾರ್ಡನ್ ನಿವಾಸಿ ನೀರಜ್ ಮಿಶ್ರಾ(37) ಬಂಧಿತರು.

ಇದು ಹವಾಲ ಹಣವಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಲ್ಸನ್‍ಗಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿ ನಗರದ ನಂಜಪ್ಪ ರಸ್ತೆ, ನಿರ್ಮಲ ಇಂಗ್ಲೀಷ್ ಶಾಲೆಯ ಹತ್ತಿರ ಮೂವರು ಹಣವನ್ನಿಟ್ಟುಕೊಂಡು ಒಬ್ಬರಿಗೊಬ್ಬರು ಸನ್ನೆ ಮುಖಾಂತರ ಮಾತನಾಡಿಕೊಂಡು ಯಾರನ್ನೂ ಕಾಯುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಮೂವರನ್ನು ಬಂಧಿಸಿ ಅವರ ಬಳಿ ಇದ್ದ 76 ಲಕ್ಷ ರೂ. ಹಣ ಹಾಗೂ ಮೂರು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ವಿಲ್ಸನ್‍ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು