ಇತ್ತೀಚಿನ ಸುದ್ದಿ
ಮಂಗಳೂರು ನೂತನ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ
09/09/2022, 14:11
ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಶುಕ್ರವಾರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು.
ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ ಗಳ ಹೆಸರನ್ನು ಘೋಷಿಸಿದರು.
ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಭಾಗವಹಿಸಿದ್ದರು.