ಇತ್ತೀಚಿನ ಸುದ್ದಿ
ರಾಹುಲ್ ಉಡುಗೆ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ಮಾತನಾಡಲಿ; ದಿನೇಶ್ ಗುಂಡೂರಾವ್
10/09/2022, 16:55
ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ದುಬಾರಿ ಟಿ- ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿ , ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ. ಸ್ವಯಂಘೋಷಿತ ಫಕೀರ ಮೋದಿಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು ಬಿಜೆಪಿ ಯವರ ಕಣ್ಣಿಗೆ ಕಾಣುವುದಿಲ್ಲವೆ..? ‘ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
ಈ ಕುರತು ಟ್ವೀಟ್ ಮಾಡಿರುವ ಅವರು,‘ಬಿಜೆಪಿ ಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ.?’ ಎಂದು ಕಿಡಿಕಾರಿದ್ದಾರೆ.
‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿ ಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಬಿಜೆಪಿ ಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆತು ನಾರುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ.? ಎಂದು ದಿನೇಶ್ ಗುಂಡೂರಾವ್ ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.