1:57 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ದಸರಾ ರಜೆ: ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಜತೆ ಶಾಸಕ ವೇದವ್ಯಾಸ ಕಾಮತ್ ಚರ್ಚೆ

12/09/2022, 17:22

ಮಂಗಳೂರು(reporterkarnataka.com): ಶಾಲಾ ಮಕ್ಕಳಿಗೆ ದಸರಾ ರಜೆ ನೀಡುವ ವಿಚಾರದಲ್ಲಿ, ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರೊಂದಿಗೆ ಚರ್ಚಿಸಿ ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್, 26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದ್ದು ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಶಾಸಕರು ಮನವಿ ಮಾಡಿದ್ದೇನೆ. ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನ ಸೇರಿದಂತೆ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಹಬ್ಬಕ್ಕೆ ಪೂರಕವಾಗಿ ರಜೆ ನೀಡಲು ಮನವಿ ಮಾಡಿದ್ದೇನೆ.  ಸಚಿವರು ಕೂಡ ಪೂರಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲಿ ಆದೇಶ ಹೊರಡಿಸುವ ಭರವಸೆ ನೀಡಿದ್ದಾರೆ. 

ಅಕ್ಟೋಬರ್ 2ನೇ ತಾರೀಕು ಗಾಂಧಿ ಜಯಂತಿಯ ಕಾರಣ ಆ ದಿನ ಹೊರತುಪಡಿಸಿ ದಸರಾ ರಜೆ ನೀಡಲು ಚಿಂತನೆ ನಡೆಸಿರುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು