3:45 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊಡವೂರು: ಸಾಲದ ಹೊರೆ ತಾಳಲಾಗದೆ ಉಪನ್ಯಾಸಕಿ ನೇಣಿಗೆ ಶರಣು

14/09/2022, 12:51

ಉಡುಪಿ(reporterkarnataka.com): ಆರ್ಥಿಕ ಸಂಕಷ್ಟದಿಂದ ಬೇಸತ್ತ ಉಪನ್ಯಾಸಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಕಾನಂಗಿ ಎಂಬಲ್ಲಿ ನಡೆದಿದೆ. 

ಕೊಡವೂರು ಕಾನಂಗಿಯ ನಿವಾಸಿ ಬೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಶಿರ್ವಾದ ಹಿಂದೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೀನಾ ಅವರ ಪತಿ ಗುಂಡಿಬೈಲು ನಿವಾಸಿ ನಿತ್ಯಾನಂದ ಎಂಬವರು 9 ತಿಂಗಳ ಹಿಂದೆ ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಸಾಲದ ಹೊರೆ ಬೀನಾ ಅವರ ಮೇಲೆ ಇತ್ತು. ಆದರೆ ತನಗೆ ಬರುತ್ತಿದ್ದ ಕಡಿಮೆ ವೇತನದಿಂದ ಸಾಲ ತೀರಿಸಲಾಗದೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಬೀನಾ ಅವರ ತಂದೆ ತಾಯಿ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಯಾರಿ ನಡೆಸಿದ್ದರು. ಆದರೆ  ಬೆಳಿಗ್ಗೆ ಬಂದು ನೋಡಿದಾಗ ಬೀನಾ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು