11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಗಳು ಜಾನಕಿ ಖ್ಯಾತಿಯ ನಟ ರವಿಪ್ರಸಾದ್ ಮಂಡ್ಯ ಇನ್ನಿಲ್ಲ: ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ

15/09/2022, 00:25

ಬೆಂಗಳೂರು(reporterkarnataka.com):ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ಧಾರಾವಾಹಿಗಳಲ್ಲಿ ಖ್ಯಾತಿ ಪಡೆದಿದ್ದ ಹಿರಿಯ ಕಲಾವಿದ ರವಿಪ್ರಸಾದ್ ಮಂಡ್ಯ ಅಕಾಲಿಕ ನಿಧನ ಹೊಂದಿದ್ದಾರೆ.

ನಟ ರವಿಪ್ರಸಾದ್ ಮಂಡ್ಯ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.

ರವಿಪ್ರಸಾದ್ ಮಂಡ್ಯರವರು ಟಿ.ಎನ್ ಸೀತಾರಾಮ್ ನಿರ್ದೇಶನದ ಕಲರ್ಸ್ ಸೂಪರ್ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಮಗಳು ಜಾನಕಿ ಧಾರಾವಾಹಿಯಲ್ಲಿ ಚಂದು ಬಾರ್ಗಿ ಪಾತ್ರದ ಮೂಲಕ ಮನೆ ಮಾತಾಗಿದ್ದರು.ಮಂಡ್ಯ ರವಿ ಅವರಿಗೆ ಕೆಲ ಸಮಯದಿಂದ ತೀವ್ರ ಅನಾರೋಗ್ಯ ಕಾಡಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗಿಲ್ಲ. ಹೀಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಕುಟುಂಬದವರು ಮಂಡ್ಯದತ್ತ ಅವರ ಪಾರ್ಥೀವ ಶರೀರ ಕೊಂಡೊಯ್ಯುತ್ತಿದ್ದು, ಅನೇಕ ಕಲಾವಿದರು ರವಿ ನಿಧನವಾರ್ತೆ ಕೇಳಿ ದುಃಖ ಹೊರಹಾಕಿದ್ದಾರೆ.

ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯದಲ್ಲಿ ನಡೆಯಲಿದೆ ಎಂದು ರವಿಪ್ರಸಾದ್ ರವರ ತಂದೆ ಡಾ. ಮುದ್ದೇಗೌಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು