4:19 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ 

15/09/2022, 22:29

ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ಸೇವಾ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಪದಗ್ರಹಣ ಉದ್ಘಾಟಿಸಿ ಮಾತನಾಡಿ, ಯುವವಾಹಿನಿ ಕೇಂದ್ರ ಸಮಿತಿಗೆ ಸರ್ಕಾರದಿಂದ ಸ್ವಂತ ನಿವೇಶನ ದೊರೆತಿರುವುದಕ್ಕೆ ಅಭಿನಂದಿಸಿದರು.

ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಸಂತೋಷ್ ಕಾಮತ್ ಮಾತನಾಡಿ, ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಯುವಕರಿಗೆ ಕರೆ ನೀಡಿದರು.

ಘಟಕದ ಅಧ್ಯಕ್ಷೆ ನಯನ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮಾಜಿ ಅಧ್ಯಕ್ಷ ಗೋಪಾಲ್.ಎಂ.ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಘಟಕದ ಹಿರಿಯ ಸದಸ್ಯೆ ಪ್ರೇಮಾ ಪ್ರಾರ್ಥಿಸಿದರು. ಅಧ್ಯಕ್ಷೆ ನಯನಾ ಸುರೇಶ್ ಸ್ವಾಗತಿಸಿ, ಕಾರ್ಯದರ್ಶಿ ಲೋಕೇಶ್ ಅಮೀನ್ ಗತವರ್ಷದ ವರದಿ ನೀಡಿದರು. 

ಪ್ರಸ್ತುತ ಸಾಲಿನ ಚುನಾವಣಾ ಅಧಿಕಾರಿ, ಘಟಕದ ನಿಕಟ ಪೂರ್ವ ಅಧ್ಯಕ್ಷೆ ಸುಮಾ ವಸಂತ್  2022 – 23ನೇ ಸಾಲಿನ ನೂತನ ಪದಾಧಿಕಾರಿಗಳ ತಂಡವನ್ನು ವೇದಿಕೆಗೆ ಆಹ್ವಾನಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ನೂತನ ಸಾಲಿನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿ ಅಭಿನಂದಿಸಿದರು.

ನೂತನ ಅಧ್ಯಕ್ಷ  ಪೃಥ್ವಿರಾಜ್ ಅವರು ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರಲು ಎಲ್ಲರ ಸಹಕಾರ ಕೋರಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ  ರವಿ ಕೊಂಡಾಣ, ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು,ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನೂತನ ಕಾರ್ಯದರ್ಶಿ  ಸುರೇಖಾ ಮೋಹನ್ ವಂದಿಸಿ,ಘಟಕ ಸದಸ್ಯ ದೀಕ್ಷಿತ್ ಹಾಗೂ ತೃಪ್ತಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು