11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ನೇಹಿತನ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ಹೋಗಿದ್ದ ಯುವತಿ ರಸ್ತೆ ಅಪಘಾತಕ್ಕೆ ಬಲಿ

17/09/2022, 19:39

ಬೆಂಗಳೂರು (reporterkarnataka.com): ಸ್ನೇಹಿತನ ಜತೆ ಬೈಕ್‌ನಲ್ಲಿ ಪಿಕ್‌ನಿಕ್‌ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. 

ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಚೈತ್ರಾ ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಶ್ರೀನಿವಾಸ ಸಾಗರ ಜಲಾಶಯ ನೋಡಲು ತೆರಳಿದ್ದಾಳೆ. ಆದ್ರೆ, ಜಲಾಶಯ ನೋಡಿ ಬೆಂಗಳೂರಿನತ್ತ ವಾಪಾಸ್ಸಾಗುವಾಗ ಚೈತ್ರಾ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಗುದ್ದಿದೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಚೈತ್ರಾ ಹಾಗೂ ಲಿಖಿತ್ ಗೌಡ ಹೈವೇಗೆ ಎಂಟ್ರೀ ಕೊಡುತ್ತಿದ್ದಂತೆಯೇ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾತಮ ಚೈತ್ರಾ ಸಾವನ್ನಪ್ಪಿದ್ದು, ಗೆಳೆಯ  ಲಿಖಿತ್ ಗೌಡ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು