7:04 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಮತದಾನದ ಜಾಗೃತಿಗೆ ದೆಹಲಿಯಲ್ಲಿ 3 ತಾಸು ರಾಷ್ಟ್ರಧ್ವಜ ಹಿಡಿದು ಕಂಪ್ಲಿಯ ಮೋಹನ್ ಕುಮಾರ್ ಓಟ!

17/09/2022, 19:31

ಹೊಸದಿಲ್ಲಿ(reporterkarnataka.com): ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಕರ್ನಾಟಕ ಹೈ ಕೋರ್ಟಿನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಮತದಾನ ಜಾಗೃತಿಗಾಗಿ ಹೊಸದಿಲ್ಲಿಯಲ್ಲಿ 3 ಗಂಟೆ ತಡೆರಹಿತ ಮ್ಯಾರಥಾನ್ ಓಟ ನಡೆಸುವ ಮೂಲಕ ಜಾಗೃತಿ ನಡೆಸಿದರು!


ಜಾಗೃತಿ ಓಟಕ್ಕೆ ಚಾಲನೆಯನ್ನ ಭಾರತ ಸರ್ಕಾರದ ಸುಪ್ರೀಂ ಕೋರ್ಟ್ ನ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾರವರಾದ ಕೆ.ಎಂ.ನಟರಾಜ್  ಅವರು ರಾಷ್ಟ್ರಧ್ವಜ ನೀಡುವ ಮೂಲಕ ಓಟಕ್ಕೆ ಚಾಲನೆ ನೀಡಿದರು. ನಂತರ ಬಲಗೈನಲ್ಲಿ ರಾಷ್ಟ್ರಧ್ವಜ,ಎಡಗೈನಲ್ಲಿ ಕರ್ನಾಟಕ ಧ್ವಜವನ್ನ ಹಿಡಿದು ಕರ್ನಾಟಕ ಭವನದಿಂದ ಓಟ ಪ್ರಾರಂಭಿಸಿದ ಮೋಹನ್ ಕುಮಾರ್ ದಾನಪ್ಪ ಇಂದಿರಾ ಗಾಂಧಿ ಸ್ಮಾರಕ, ರಾಯಭಾರಿ ಕಚೇರಿ ಅಕ್ಬರ್ ರಸ್ತೆ, ಇಂಡಿಯಾ ಗೇಟ್, ಜನಪಥ್ ರಸ್ತೆ, ಸುಪ್ರೀಂ ಕೋರ್ಟ್, ರಾಜ್ ಘಾಟ್, ರಾಷ್ಟ್ರಪತಿ ಭವನ್ ಮೂಲಕ ಕೆಂಪುಕೋಟೆಗೆ ತಲುಪಿದರು, 

ನಂತರ ಮಾತನಾಡಿದ ಮೋಹನ್ ಕುಮಾರ್ ರವರು ಮತದಾನ ನಮ್ಮ ಸಾಂವಿಧಾನಿಕ ಹಕ್ಕು, ಮತದಾನ ಮಾಡುವುದು ಸಹ ನಮ್ಮ ಆದ್ಯ ಕರ್ತವ್ಯ, ಮತದಾನ ಮಾಡಬೇಕಾದ ನಾಗರೀಕ ಪ್ರಭುಗಳು ಸಾಮಾಜಿಕ ಜಾಲತಾಣಗಳಲ್ಲಿ ನಿರತರಾಗಿರುವುದು ಮತ್ತು ಜವಾಬ್ದಾರಿಗಳ ಬಗ್ಗೆ ಉದಾಸೀನ ತೋರುತ್ತಿರುವುದರಿಂದ ಚುನಾವಣೆಗಳ ಮತದಾನದ ಶೇಕಡಾ ನೂರರಷ್ಟು ತಲುಪಲು ಅಸಾಧ್ಯವಾಗಿದೆ, ಮುಂಬರುವ ವಿಧಾನ ಸಭಾ, ಲೋಕಸಭಾ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ತಿಳಿಸಿದರು, 

ಕರ್ನಾಟಕದಿಂದ 2600 ಕಿ ಮೀ ದೂರದಲ್ಲಿರುವ ದೆಹಲಿಗೆ ಆಗಮಿಸಿ ವಿನೂತನ ಮ್ಯಾರಥಾನ್ ಕೈಗೊಂಡಿರುವುದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದರು,

 ಈ ಜಾಗೃತಿ ಮ್ಯಾರಥಾನ್ ನ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ.ನಟರಾಜ್, ಎಂ ಎಸ್ ಐ ಎಲ್ ನ ನಿರ್ದೇಶಕ ಡಾ.ಎ.ಎಂ ಚಂದ್ರಪ್ಪ ನವರಿಗೆ ಸಲ್ಲಿಸಿದರು!

ಈ ಜಾಗೃತಿ ಓಟಕ್ಕೆ ರಾಜ್ಯದ ಸಚಿವರು, ಶಾಸಕರು, ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಹೈ ಕೋರ್ಟಿನ ಎಎಜಿ, ಎಎಸ್ಜಿಗಳು ಮೆಚ್ಚುಗೆ ವ್ಯಕ್ತ ಪಡಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು