8:49 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಶಂಕರನಾರಾಯಣ: ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳವು

18/09/2022, 14:52

ಕುಂದಾಪುರ(reporterkarnataka.com): ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. 

ನಾಗೇಂದ್ರ ಪ್ರಸಾದ್ ಅವರು ಕುಟುಂಬ ಸಮೇತರಾಗಿ ಶಂಕರನಾರಾಯಣ ದೇವಸ್ಥಾನಕ್ಕೆ ಪಾರಾಯಣ ಪೂಜೆಗಾಗಿ ತೆರಳಿದ್ದರು. ಪೂಜೆ ಮುಗಿಸಿ ಬಂದು ನೋಡುವಾಗ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲ ಗೋಡ್ರೇಜ್ ಕಪಾಟಿನ ಬಾಗಿಲನ್ನು ತೆರೆದು ಅದರೊಳಗಿದ್ದ 50 ಸಾವಿರ ನಗದು, 1/2 ಪವನ್ ತೂಕದ ಒಂದು ಜೊತೆ ಒಲೆ, 3ಸಾವಿರ ರೂ. ಬೆಳ್ಳಿಯ ಅರತಿ ತಟ್ಟೆ, 1ಸಾವಿರ ರೂ. ಬೆಳ್ಳಿಯ ಕುಂಕುಮ ಹಾಕುವ ಭರಣಿ, 600 ರೂ. ಮಗುವಿನ ಕಾಲು ಗೆಜ್ಜೆ, 150 ರೂ. ಮಗುವಿನ ಬೆಳ್ಳಿಯ ಬ್ರಾಸ್ ಲೈಟ್ ಹಾಗೂ 500 ರೂ. ಬೆಳ್ಳಿಯ ಲೋಟ ಸಹಿತ ಒಟ್ಟು 61,250 ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು