2:15 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸೆಲ್ಫಿ ಹುಚ್ಚು: ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದು ಇಬ್ಬರು ಪಿಯು ವಿದ್ಯಾರ್ಥಿಗಳು ಸಾವು

19/09/2022, 19:07

ರಾಯಚೂರು(reporterkarnataka.com): ಕಲಮಲಾ ಬಳಿಯ ತುಂಗಭದ್ರಾ ಎಡದಂಡೆ ಕಾಲುವೆ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಸೆಲ್ಫಿ ತೆಗೆಯಲು ಹೋದ ಇಬ್ಬರು ಪಿಯು ವಿದ್ಯಾರ್ಥಿಗಳು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16) ಎಂದು ಗುರುತಿಸಲಾಗಿದೆ.

ಪಿಕ್ನಿಕ್ ಗಾಗಿ ಬಂದಿದ್ದ ವಿದ್ಯಾರ್ಥಿಗಳು ನಿನ್ನೆ ಸಂಜೆ ಸೆಲ್ಫಿ ತೆಗೆಯಲು ಕಾಲುವೆಗೆ ಬಿದ್ದಿದ್ದಾರೆ. ಅದಾದ ಬಳಿಕ ನಾಪತ್ತೆ ಆಗಿದ್ದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಇಂದು ಎನ್.ಆರ್. ಶೆಟ್ಟಿಯ ಮುಚ್ಚಿರುವ ಹೈಡ್ರಲ್ ಪ್ರಾಜೆಕ್ಟ್ ನಲ್ಲಿ ಶವವಾಗಿ ಪತ್ತೆ ಆಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು