1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ: ಸೆ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ

19/09/2022, 19:12

ಹುಬ್ಬಳ್ಳಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವರಿಗೆ ಮಹಾನಗರ ಪಾಲಿಕೆ ವತಿಯಿಂದ ಸೆ. 26ರಂದು 
ಪೌರ ಸನ್ಮಾನ ನೀಡಲಾಗುವುದು.

ಈ ಸಮಾರಂಭಕ್ಕೆ 5 ಸಾವಿರ ಮಂದಿಗೆ ಆಹ್ವಾನ ನೀಡಲಾಗುವುದು ಎಂದು ಹುಬ್ಬಳ್ಳಿ ಮೇಯರ್ ಈರೇಶ ಅಂಚಟಗೇರಿ ತಿಳಿಸಿದ್ದಾರೆ.

ದೇಶಪಾಂಡೆ ನಗರದ ಕರ್ನಾಟಕ ಜಿಮ್ಖಾನ ಮೈದಾನದಲ್ಲಿ ಸಮಾರಂಭ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕುಸುಮಾವತಿ ಶಿವಳ್ಳಿ, ಸಿ.ಎಂ. ನಿಂಬಣ್ಣವರ ಹಾಗೂ ಪಾಲಿಕೆ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಅವಳಿನಗರದ ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು ಐದು ಸಾವಿರ ಮಂದಿಗೆ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು. ಜೊತೆಗೆ, 500 ಪೌರ ಕಾರ್ಮಿಕರಿಗೂ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು