ಇತ್ತೀಚಿನ ಸುದ್ದಿ
ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಪ್ರಸಕ್ತ ವರ್ಷದಲ್ಲೇ ಭಗವದ್ಗೀತೆ ಬೋಧನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
19/09/2022, 20:42

ಬೆಂಗಳೂರು(reporterkarnataka.com):ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ
ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು.
ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.