7:34 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗದ ರಾಣಿ ಜೇನು ರಮ್ಯಾ ಬಿಜೆಪಿ ಸೇರ್ತಾರಾ?: ಹಳೆ ಮೈಸೂರು ಭಾಗದಲ್ಲಿ ಕಮಲ ಬಲವರ್ಧನೆಗೆ ಕೇಸರಿ ಪಾಳಯ ಬಳಸುತ್ತಾ?

19/09/2022, 22:37

ಬೆಂಗಳೂರು (reporterkarnatak.com) : ಕನ್ನಡ ಚಿತ್ರರಂಗದ ರಾಣಿಜೇನು, ಮಾಜಿ ಸಂಸದೆ ರಮ್ಯಾ ಅವರು ಕಾಂಗ್ರೆಸ್ ತ್ಯಜಿಸಿ ಕೇಸರಿ ಪಾಳಯದ ಬಿಜೆಪಿ ಸೇರ್ತಾರಾ? ಇಂತಹ ಒಂದು ಗುಸು ಗುಸು ರಾಜಧಾನಿ ಬೆಂಗಳೂರು ಮತ್ತು ಸಕ್ಕರೆ ನಾಡು ಮಂಡ್ಯದಲ್ಲಿ ಹರಿದಾಡಲಾರಂಭಿಸಿದೆ.

ರಾಜ್ಯ ರಾಜಕಾರಣದಲ್ಲಿ ಮಿಂಚಿನಂತೆ ಕಾಣಿಸಿಕೊಂಡು ಸಂಚಲನ ಸೃಷ್ಟಿಸಿ ಅಷ್ಟೇ ವೇಗದಲ್ಲಿ ಮರೆಯಾದ ಮಾಜಿ ಸಂಸದೆ ರಮ್ಯಾ ಇದೀಗ ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷದೊಳಗೆ ಕಡೆಗಣನೆಗೆ ಒಳಗಾದಂತೆ ಕಂಡುಬಂದಿರುವ ಅವರು ಕಮಲ ಪಾಳಯದೊಳಗೆ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕಿಳಿದಿದ್ದಾರೆ ಎನ್ನಲಾಗಿದೆ.

ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುವುದಕ್ಕೆ ಇನ್ನೂ ಮೀನಮೇಷ ಎಣಿಸುತ್ತಿದ್ದಾರೆ. ಪಕ್ಷ ಸೇರ್ಪಡೆ ಕುರಿತು ಸ್ಪಷ್ಟತೀರ್ಮಾನ ಕೈಗೊಳ್ಳಲಾಗದೆ ಗೊಂದಲದಲ್ಲಿದ್ದಾರೆ. ಸುಮಲತಾ ಸೇರ್ಪಡೆ ವಿಚಾರ ಇನ್ನೂ ರಾಷ್ಟ್ರ ನಾಯಕರ ಹಂತದಲ್ಲಿದೆ. ಆ ಮಾತುಕತೆ ಮುರಿದುಬಿದ್ದರೆ ರಮ್ಯಾ ಬಿಜೆಪಿ ಸೇರುವುದಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಬಹುದು ಎಂದು ಹೇಳಲಾಗುತ್ತಿದೆ. ರಮ್ಯಾ ಬಿಜೆಪಿ ಸೇರುವ ವಿಚಾರವಿನ್ನೂ ಪ್ರಾಥಮಿಕ ಹಂತದಲ್ಲಿದೆ. ಇನ್ನೂ ಈ ಬಗ್ಗೆ ಎರಡು ಮೂರು ಸುತ್ತಿನ ಮಾತುಕತೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಸ್ಪಷ್ಟಚಿತ್ರಣ ಸಿಗುವುದು ಕಷ್ಟ.

ರಮ್ಯಾ ವರ್ಚಸ್ಸು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ರಮ್ಯಾ ಅವರನ್ನು ಒಂದು ಆಯ್ಕೆಯಾಗಿ ಇಟ್ಟುಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಾಜಿ ಸಂಸದೆಯಾಗಿರುವ ರಮ್ಯಾ ವರ್ಚಸ್ವಿ ನಾಯಕಿಯಾಗಿದ್ದಾರೆ. ಆರು ತಿಂಗಳ ಅಲ್ಪಾವಧಿಯಲ್ಲಿ ಜಿಲ್ಲೆಯೊಳಗೆ ಗಮನಸೆಳೆಯುವಂತಹ ಕಾರ್ಯಗಳನ್ನು ಮಾಡುವುದರೊಂದಿಗೆ ಜನಪ್ರಿಯತೆ ಗಳಿಸಿಕೊಂಡಿದ್ದರು. ಆದರೆ, 2015ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ರಮ್ಯಾ ಸೋಲಿಗೆ ಕಾರಣವಾಗಿ ಜಿಲ್ಲೆಯಿಂದ ನಿರ್ಗಮಿಸುವಂತೆ ಮಾಡಿತು.

ಇತ್ತೀಚಿನ ಸುದ್ದಿ

ಜಾಹೀರಾತು