6:16 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!!

20/09/2022, 14:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ಏಕಮುಖ ಸಂಚಾರ ರಸ್ತೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಆರಾಮವಾಗಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಸಂಗವಾಗಿದ್ದು, ಆ ಜಾಗದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸರೊಬ್ಬರು ಯಾವುದೇ ತಾರತಮ್ಯ ಮಾಡದೆ ಕಾನೂನು ಉಲ್ಲಂಘಿಸಿದ ಕಾನ್ ಸ್ಟೇಬಲ್ ಅವರ ಫೋಟೋ ಕ್ಲಿಕ್ಕಿಸಿದರು. ಪ್ರಾಮಾಣಿಕತೆ ಮೆರೆದ ಪೊಲೀಸ್ ಸಂದೀಪ್ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ರಸ್ತೆ ಏಕಮುಖ ಸಂಚಾರ ಎಂದು ತಿಳಿದಿದ್ದರೂ, ಅರ್ಧ ಭಾಗ ಬ್ಯಾರಿಗೇಟ್ ಹಾಕಿದ್ದರೂ ಜನರು ಪೊಲೀಸರ  ಎದುರಲ್ಲೆ ವಾಹನಗಳಲ್ಲಿ ತೆರಳುತ್ತಾರೆ. 

ಪೊಲೀಸರೂ ಎಂದಿನಂತೆ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸುತ್ತಾರೆ. ನಂತರ ಫೈನ್ ಹಾಕಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು