2:24 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ

21/09/2022, 12:55

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ. 

ತುಳು ವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ಕಾರ್ಯಕಮದ ಯಶಸ್ವಿಗಾಗಿ ಈಗಾಗಲೇ ಸ್ವಾಗತ ಸಮಿತಿ ರಚಿಸಲಾಗಿದ್ದು ಪುಣಿಂಚಿತ್ತಾಯರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಂಶೋಧಾನತ್ಮಕ ವಿಷಯಗಳನ್ನು ಪ್ರಸ್ತುತಪಡಿಸುವುದು ಕಾರ್ಯಕ್ರಮದ ಧ್ಯೆಯವಾಗಿದೆ. ಈ ಬಗ್ಗೆ ವಿಚಾರ ಗೋಷ್ಠಿ, ಸಾಹಿತ್ಯ ಗೋಷ್ಠಿ, ಪುವೆಂಪು ಸಮಕಾಲೀನ ಸಾಹಿತಿಗಳ ಸಮ್ಮಿಲನ, ಪುವೆಂಪು ರಚಿತ ನಾಟಕಗಳ ಪ್ರದರ್ಶನ ಹಾಗೂ ಅಭಿಮಾನಿಗಳ ವಿಚಾರ ಮಂಡನೆ,ಪುವೆಂಪು ಸಮ್ಮಾನ್ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಏಕ ದಿನ ಸಮ್ಮೇಳನ ಸರ್ವಾಧ್ಯಕ್ಷರಾಗಿ ಗಲ್ಫ್ ರಾಷ್ಟ್ರದ ತುಳು ಸಂಘಟಕ, ಸಾಹಿತ್ಯ, ಸಾಂಸ್ಕೃತಿಕ ಪ್ರೋತ್ಸಾಹಕ, ಮಾರ್ಗದರ್ಶಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. 

ಈ ಹಿಂದೆ ಬದಿಯಡ್ಕದಲ್ಲಿ ನಡೆದ ವಿಶ್ವ ತುಳುವೆರೆ ಆಯನೋದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸರ್ವೋತ್ತಮ ಶೆಟ್ಟಿ ಅವರು ಬಳಿಕ ಯುಎಇಯಲ್ಲೂ ತುಳುವೆರೆ ಆಯನೋ ನಡೆಸುವ ಮೂಲಕ ತುಳು ನಾಡು ನುಡಿ ಸಂಸ್ಕೃತಿಯ ಪ್ರೋತ್ಸಾಹಕ್ಕೆ ಕೊಡುಗೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು