8:26 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ

21/09/2022, 21:02

ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ  ಗಣಿ ಮತ್ತು ಭೂವಿಜ್ಞಾನ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕುಂದಾಪುರ ತಾಲೂಕು ತ್ರಾಸಿ,  ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ  ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ..

ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು  ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ  ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ  ಲಾರಿಗಳನ್ನು  ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು