5:57 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು

21/09/2022, 21:57

ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು 
ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ.

ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಾಜ ಸೇವಕ ವಿಶು ಶೆಟ್ಟಿ ಅಣ್ಣಪ್ಪಯ್ಯ ಅವರನ್ನು ಮೊದಲು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ಅನುಮಾನಗೊಂಡ ಅವರು ಕೂಡಲೇ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಸಹಾಯವಾಣಿಯ ಸಿಬ್ಬಂದಿಗಳು, ವ್ಯಕ್ತಿಯನ್ನು ವಿಶು ಶೆಟ್ಟಿ ಅವರ ವಾಹನದಲ್ಲಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

ಆಶ್ರಮದ ಆರೈಕೆಯಿಂದ ಸಾಂತ್ವನಗೊಂಡ ಬಳಿಕ ಅಣ್ಣಪ್ಪಯ್ಯ ಅವರು ತಾವು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ನಡೆಸಲು ಮುಂದಾಗಿರುವ ವಿಷಯವನ್ನು ತಿಳಿಸಿದ್ದಾರೆ. ಕೊನೆಗೆ ಅವರಿಂದ ಮಗನ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಮಾಹಿತಿ ನೀಡಿದಾಗ ತನ್ನ ತಂದೆ ಕಾಶಿಯಾತ್ರೆಗೆ ಹೋಗಿದ್ದಾರೆ ಎಂದು ಮಗ ಉತ್ತರಿಸಿದ್ದ.

ಆದರೆ ವಿಷಯದ ಗಂಭೀರತೆಯನ್ನು ಅರಿತ ಮಗ ಉಡುಪಿಗೆ ಬಂದು ತಂದೆಯನ್ನು ಊರಿಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು