4:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ

22/09/2022, 11:01

ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.

ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು