12:34 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು