2:53 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಎಸ್ ಡಿಪಿಐ, ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗುತ್ತಾ?: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು?

22/09/2022, 15:49

ಬೆಂಗಳೂರು(reporterkarnataka.com): ಎಸ್ ಡಿಪಿಐ ಮತ್ತು ಪಿಎಫ್ ಐ ಶೀಘ್ರದಲ್ಲೇ ಬ್ಯಾನ್ ಆಗಲಿದೆಯೇ..? ಅಂತಹದೊಂದು ಸೂಚನೆ ಬರಲಾರಂಭಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು  ಈ ಬಗ್ಗೆ ಹೇಳಿಕೆ ನೀಡಿದ್ದಾರೆ . 

ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್ ಡಿಪಿಐ ) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ( ಪಿಎಫ್ ಐ) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಈಗ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್ ಡಿಪಿಐ ಮತ್ತು ಪಿಎಫ್ ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದವರು ಹೇಳಿದರು.

ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ. ದೇಶವ್ಯಾಪಿ ಈ ದಾಳಿ ನಡೆಯುತ್ತಿದೆ ಎಂದು ಗೃಹ ಸಚಿವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು