11:30 PM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮೆದುಳು ನಿಷ್ಕ್ರಿಯಗೊಂಡ ಪಿಯು ವಿದ್ಯಾರ್ಥಿನಿಯ ಹೃದಯ ಬೆಂಗಳೂರಿಗೆ ರವಾನೆ: ಅಗಲಿದ ಗೆಳತಿಗೆ ಬಸವನಹಳ್ಳಿಯಲ್ಲಿ ಕಣ್ಣೀರಿನ ವಿದಾಯ

22/09/2022, 18:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೆದುಳು ನಿಷ್ಕ್ರಿಯವಾಗಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಹೃದಯವನ್ನು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ರವಾನಿಸಲಾಯಿತು. ಈ ಮಧ್ಯೆ ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅಗಲಿದ ಗೆಳತಿಗೆ ಕಣ್ಣೀರ ವಿದಾಯ ಹೇಳಿದರು.ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಯಿತು.
ಬಸ್ಸಿನಿಂದ ಬಿದ್ದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾಳ ಮೆದುಳು ನಿಷ್ಕ್ರಿಯಗೊಂಡಿತ್ತು. ವಿದ್ಯಾರ್ಥಿನಿಯ ಒಟ್ಟು ಒಂಬತ್ತು ಅಂಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ.

ಇತ್ತ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ರಕ್ಷಿತಾ ಗೆ ಸಾವಿರಾರು ವಿದ್ಯಾರ್ಥಿನಿಯರಿಂದ ಕಣ್ಣೀರಿನ ವಿದಾಯ ಹೇಳಿದರು.


ಸ್ನೇಹಿತೆಯನ್ನು ಕಳೆದುಕೊಂಡು ವಿದ್ಯಾರ್ಥಿನಿಯರು ಬಿಕ್ಕಳಿಸಿ ಬಿಕ್ಕಳಿಸಿ ಅತ್ತು ಬಿಟ್ಟರು. ರಕ್ಷಿತಾಳ ಪಾರ್ಥಿವ ಶರೀರ ಕಂಡು ವಿದ್ಯಾರ್ಥಿನಿಯರ ಜತೆ ಶಿಕ್ಷಕರು, ಸಾರ್ವಜನಿಕರು ಕಣ್ಣೀರು ಹಾಕಿದರು.ಚಿಕ್ಕಮಗಳೂರು ನಗರದಿಂದ ಸ್ವಗ್ರಾಮಕ್ಕೆ ರಕ್ಷಿತಾ ಮೃತದೇಹ ರವಾನೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು