8:46 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಸಲು ವಿರೋಧಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

22/09/2022, 21:38

ಉಡುಪಿ(reporterkarnataka.com):
ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. 

ಕೊಳಚೆ ನಿರ್ಮೂಲನೆ ಮಂಡಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿ ಆಯ್ಕೆಯಾದ ಎಲ್ಲರಿಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಕಾರ್ಮಿಕರನ್ನು ನೋಂದಾಯಿಸಿ ಇದರ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ನೈಜ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆ ಮೂಲಕ ನೋಂದಣಿಯಾಗಿರುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಕಡಿಮೆ ಇರುವುದರಿಂದ ಕಾರ್ಮಿಕರಿಗೆ  ಬಸ್ ಪಾಸ್ ಬದಲು ನಗದು ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಅಧ್ಯಕ್ಷ ಶೇಖರ್ ಬಂಗೇರ, ಶಶಿಧರ್ ಗೊಲ್ಲ ಹಾಗೂ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು