2:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೇರಳ: ಎನ್‌ಐಎ ದಾಳಿ ಖಂಡಿಸಿ ಪಿಎಫ್ ಐನಿಂದ ನಾಳೆ ಹರತಾಳ

22/09/2022, 22:14

ಕೋಝಿಕ್ಕೋಡ್(reporterkarnataka.com): ದೇಶಾದ್ಯಂತ ಪಿಎಫ್‌ಐ, ಎಸ್‌ಡಿಪಿಐ ಕಚೇರಿ, ನಾಯಕರ ಮನೆ ಮೇಲಿನ ಎನ್‌ಐಎ ದಾಳಿಯನ್ನು ಖಂಡಿಸಿ ನಾಳೆ ರಾಜ್ಯದಲ್ಲಿ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದೆ.

ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹರತಾಳ ನಡೆಯಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎ ಅಬ್ದುಲ್ ಸತ್ತಾರ್ ಹೇಳಿದ್ದಾರೆ.

ಕೇರಳ ಸೇರಿದಂತೆ ದೇಶದ 13 ರಾಜ್ಯಗಳಲ್ಲಿ ಎನ್‌ಐಎ ಮತ್ತು ಇಡಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳು ಮತ್ತು ನಾಯಕರ ಮನೆಗಳ ಮೇಲೆ ಜಂಟಿ ದಾಳಿಗಳನ್ನು ಆಯೋಜಿಸಿತ್ತು. ರಾಷ್ಟ್ರೀಯ ನಾಯಕರು ಸೇರಿದಂತೆ 106 ಜನರನ್ನು ಬಂಧಿಸಲಾಗಿದ್ದು, ಈ ಪೈಕಿ ಹೆಚ್ಚಿನ ನಾಯಕರನ್ನು ಕೇರಳದಿಂದ ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು