8:41 AM Tuesday7 - April 2026
ಬ್ರೇಕಿಂಗ್ ನ್ಯೂಸ್
Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ

ಇತ್ತೀಚಿನ ಸುದ್ದಿ

ಕೇಂದ್ರ ಸಂಪುಟ ಶೀಘ್ರ ವಿಸ್ತರಣೆ: ಡಿ.ವಿ. ಸದಾನಂದ ಗೌಡ ಔಟ್?; ಮತ್ಯಾರಿಗೆ ರಾಜ್ಯದಿಂದ ಸಚಿವ ಸ್ಥಾನ?

27/06/2021, 19:48

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯಕ್ಕೆ ಎರಡು ಸ್ಥಾನ ಕೊಡುವ ಬಗ್ಗೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಈ ಮಧ್ಯೆ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸಂಪುಟದಿಂದ ಕೊಕ್ ನೀಡಿ ಹೊಸ ಮುಖಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿ ಹಾಗೂ ರೈಲ್ವೆ ಸಹಾಯಕ ಸಚಿವ ಸುರೇಶ್ ಅಂಗಡಿ ನಿಧನ ಹಾಗೂ ಶಿವಸೇನೆ ಮತ್ತು ಅಕಾಲಿದಳದ ಸಚಿವರು ಸಂಪುಟದಿಂದ ನಿರ್ಗಮಿಸಿದ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಿಲ್ಲ. ಅದಲ್ಲದೆ 2024ರಲ್ಲಿ ಸಂಸತ್ ಚುನಾವಣೆ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ ಎನ್ನಲಾಗಿದೆ.

ಬೆಳಗಾವಿಯ ಸುರೇಶ್ ಅಂಗಡಿ ಅವರ ಸಾವಿನಿಂದ ತೆರನಾದ ಸ್ಥಾನವನ್ನು ಅವರದೇ ಸಮುದಾಯವರಿಗೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿಧನರಾದ ಸಿ.ಎಂ. ಉದಾಸೀನ ಅವರ ಪುತ್ರ ಶಿವಕುಮಾರ್ ಉದಾಸಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಹೆಸರು ಕೇಳಿಬರುತ್ತಿದೆ.

ರಾಜ್ಯ ನಾಯಕತ್ವ ಮುಂದಿನ ವಿಧಾನಸಭೆ ಚುನಾವಣೆ ವರೆಗೆ ಬದಲಾಗುವ ಸಾಧ್ಯತೆ ಕಡಿಮೆ ಇರುವುದರಿಂದ ಶಿವಕುಮಾರ್ ಉದಾಸಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಇಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಉಮೇಶ್ ಜಾಧವ್ ಅವರ ಹೆಸರು ಕೂಡ ಇದೆ. ಈ ಮಧ್ಯೆ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸಂಪುಟದಿಂದ ಕೈಬಿಡುತ್ತಾರೆ ಎಂಬ ಮಾಹಿತಿ ಇದೆ. ಡಿವಿಎಸ್ ಬದಲು ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎನ್ನಲಾಗಿದೆ. ಡಿವಿಎಸ್ ಅವರನ್ನು ಸಂಪುಟದಿಂದ ಕೈಬಿಟ್ಟರೆ ಉಮೇಶ್ ಜಾಧವ್ ಅವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗುವ ಬಹುತೇಕ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು