2:48 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ: ಮಾಜಿ ಪ್ರಧಾನಿ ದೇವೇಗೌಡ

23/09/2022, 15:16

ಬೆಂಗಳೂರು(reporterkarnataka.com): ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ತಮ್ಮ ಆರೋಗ್ಯದ ಸ್ಥಿತಿ ಕುರಿತು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಈ ಕಾರಣದಿಂದ ಕೆಲ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

‘ಮನೆಯಿಂದಲೇ ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಇನ್ನು ಕೆಲವು ದಿನಗಳ ನಂತರ ನಾನೇ ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುತ್ತೇನೆ. ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ಯಾವುದೇ ಕಾರಣಕ್ಕೂ ಮುಖಂಡರು, ಕಾರ್ಯಕರ್ತರು ಅನ್ಯತಾ ಭಾವಿಸಬಾರದು ಎಂದು ಕೋರುತ್ತೇನೆ’ ಎಂದು ತಿಳಿಸಿದ್ದಾರೆ.

ನನ್ನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕಂದಾಯ ಸಚಿವ ಆರ್‌. ಅಶೋಕ ಸೇರಿದಂತೆ ಎಲ್ಲ ಸಚಿವರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ. ಹಾಗೆಯೇ, ನನ್ನ ಆರೋಗ್ಯಕ್ಕಾಗಿ ನಾಡಿನ ದೇವಾಲಯಗಳಲ್ಲಿ ಪೂಜೆ, ಹರಕೆ ಮಾಡಿಕೊಂಡು ಅನ್ನದಾನ ಇತ್ಯಾದಿಗಳನ್ನು ಮಾಡಿದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಪ್ರೀತಿ ವಿಶ್ವಾಸಕ್ಕೆ ನನ್ನ ಹೃದಯ ತುಂಬಿ ಬಂದಿದೆ’ ಎಂದು ದೇವೇಗೌಡ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು