1:15 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

23/09/2022, 23:43

ಉಡುಪಿ(reporterkarnataka.com):
ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾದೀಕ್‌ ಅಹಮ್ಮದ್‌ (40), ಅಫ್ರೋಜ್‌ ಕೆ (39), ಇಲಿಯಾಸ್‌ ಸಾಹೇಬ್‌(46), ಇರ್ಷಾದ್‌ (37), ಫಯಾಜ್‌ ಅಹಮ್ಮದ್‌(39), ಮಹಮ್ಮದ್‌ ಅಶ್ರಫ್‌(43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30), ಶೌಕತ್‌ಅಲಿ (31) ಹಾಗೂ ಮಹಮ್ಮದ್‌ ಝಹೀದ್‌(24) ಎಂಬವರನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಉಡುಪಿಯ ಡಯಾನಾ ಸರ್ಕಲ್ ಬಳಿ ಪಿಎಫ್ ಐ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ಎನ್ಐಎ ದಾಳಿಯನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ್ದು, ಸ್ಥಳಕ್ಕೆ ತೆರಳಿದ ಉಡುಪಿ ನಗರ ಠಾಣೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದ್ದಾರೆ. ಆದರೆ, ಕಾರ್ಯಕರ್ತರು ಸ್ಥಳದಿಂದ ತೆರಳದಿದ್ದಾಗ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು