8:49 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕೇಸರಿ ಪಾಳಯದಿಂದ ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ‘ಪಿಲಿಪರ್ಬ’: ನಳಿನ್, ವೇದವ್ಯಾಸ್ ಸಾರಥ್ಯ

24/09/2022, 11:59

ಮಂಗಳೂರು(reporterkarnataka.com):ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಕಡಲನಗರಿ ಮಂಗಳೂರಿನಲ್ಲಿ ಕೇಸರಿ ಪಾಳಯದಿಂದ ಪಿಲಿನಲಿಕೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಸಾರಥ್ಯದಲ್ಲಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಮುಂದಾಳತ್ವದಲ್ಲಿ ಇದೇ ಮೊದಲ ಬಾರಿಗೆ ಅಕ್ಟೋಬರ್ 2ರಂದು ನಗರದ ನೆಹರು ಮೈದಾನದಲ್ಲಿ ಕುಡ್ಲದ ‘ಪಿಲಿಪರ್ಬ’ ಕಾರ್ಯಕ್ರಮ ನಡೆಯಲಿದೆ.

ಕರಾವಳಿಯ ಸಾಂಪ್ರದಾಯಿಕ ಕಲೆಯಾದ ಹುಲಿವೇಷಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕುಡ್ಲದ ಪಿಲಿ ಪರ್ಬ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 

ವಿಜೇತರಾಗುವ ಹುಲಿ ತಂಡಕ್ಕೆ ಪ್ರಥಮ ಬಹುಮಾನವಾಗಿ 5 ಲಕ್ಷ ರೂ.ಗಳನ್ನು ಹಾಗೂ ಎರಡನೇ ವಿಜೇತ ತಂಡಕ್ಕೆ 2.5 ಲಕ್ಷ ರೂ. ನಿಗದಿಪಡಿಸಲಾಗಿದೆ. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ದಾಖಲೆಯ ಮೊತ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು