8:46 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

25/09/2022, 14:49

ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು.

ಈ ಬಸ್ ನಿಲ್ದಾಣದಲ್ಲಿ ವೈಫೈ ಚಾರ್ಜಿಂಗ್ ಪಾಯಿಂಟ್, ತಾತ್ಕಾಲಿಕ ವಿಶ್ರಾಂತಿಗೆ ಆಸನ, ಮಹಿಳೆಯರ, ಮಕ್ಕಳ ಸುರಕ್ಷತೆಗೆ ಅಲರ್ಟ್ ಅಲರಾಂ ಮತ್ತಿತರ ವ್ಯವಸ್ಥೆಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಯೋ ಶೌಚಾಲಯ ವ್ಯವಸ್ಥೆ ನಿರ್ಮಾಣ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ವರುಣ್ ಚೌಟ, ಸ್ಥಾಯೀ ಸಮಿತಿ ಅಧ್ಯಕ್ಷೆ ನಯನ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಬಿಜೆಪಿ ಪ್ರಮುಖರಾದ ಗಣೇಶ್ ಹೊಸಬೆಟ್ಟು, ವಿಠಲ ಸಾಲ್ಯಾನ್,  ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಮುಕ್ಕ, ಪೃಥ್ವಿರಾಜ್ ಶೆಟ್ಟಿ ಕಡಂಬೋಡಿ ಕೆ, ರಾಘವೇಂದ್ರ ರಾವ್, ಕೆ ಪಿ ಚಂದ್ರಶೇಖರ್, ಸುನಿಲ್ ಕುಳಾಯಿ ,ರಾಘವೇಂದ್ರ ಶೆಣೈ, ಉಮೇಶ್ ದೇವಾಡಿಗ ಇಡ್ಯಾ, ಓಂಪ್ರಕಾಶ್ ಶೆಟ್ಟಿಗಾರ್, ಪವಿತ್ರ ನಿರಂಜನ್, ರಮೇಶ್ ಅಳಪೆ, ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲೋಕನಾಥ್, ತಿರುಮಲೇಶ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ, ಮೂಡಾದ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು