11:17 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾರ್ಕಳ ತಾಲೂಕು ಪತ್ರಕರ್ತರ ಸಂಘ ನೂತನ ಅಧ್ಯಕ್ಷ ಗಣೇಶ್ ನಾಯಕ್,  ಪ್ರ. ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ

25/09/2022, 17:49

ಕಾರ್ಕಳ(reporterkarnataka.com): ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಗಣೇಶ್ ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಭೀಮಗುಳಿ ಆಯ್ಕೆಯಾಗಿದ್ದಾಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಯಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಶನಿವಾರ ಜರುಗಿತು. ಕಾರ್ಯಕರ್ತರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ  ರಾಜೇಶ್  ಶೆಟ್ಟಿ, ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. 


ಗಣೇಶ್ ಸಾಣೂರು ಹಾಗೂ ಮಹಮ್ಮದ್ ಷರೀಫ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಗಣೇಶ್ ಸಾಣೂರು  ಅದ್ಯಕ್ಷ ಸ್ಥಾನಕ್ಕೆ ಆಯ್ಕೆ ಯಾದರು. ಬಾಲಕೃಷ್ಣ ಭೀಮಗುಳಿ ಸರ್ವಾನುಮತದಿಂದ ಅವಿರೋಧ ಆಯ್ಕೆಗೊಂಡರು. ಕೋಶಾಧಿಕಾರಿ ರಾಂ ಅಜೆಕಾರ್ ಅವಿರೋಧವಾಗಿ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆ ಕಾರ್ಯದರ್ಶಿಯಾಗಿ ಹರೀಶ್ ಆಚಾರ್ಯ , ಕ್ರೀಡಾ ಕಾರ್ಯದರ್ಶಿ ಉದಯ್ ಮುಂಡ್ಕೂರ್, ಸಾಂಸ್ಕೃತಿಕ ಕಾರ್ಯದರ್ಶಿ ಹರಿಪ್ರಸಾದ್ ನಂದಳಿಕೆ  ಅವಿರೋಧವಾಗಿ  ಆಯ್ಕೆಗೊಂಡರು. ಜಿಲ್ಲಾ ಉಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾಾ ಸಮಿತಿ ಪ್ರತಿನಿಧಿ  ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಮೊಹಮ್ಮದ್ ಶರೀಫ್  ಹಾಗೂ ನಿಕಟಪೂರ್ವ ಕಾರ್ಯದರ್ಶಿ ಕೃಷ್ಣ ನಾಯ್ಕ್   ನೂತನ ಪದಾಧಿಕಾರಿಗಳಿಗೆ ದಾಖಲೆ ಹಸ್ತಾಂತರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು