10:26 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಹಾನಗಲ್ ಬೈ ಎಲೆಕ್ಷನ್: ದಿನಾಂಕ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಫೈಟ್ 

28/06/2021, 08:13

ಕೃಷ್ಣಪ್ರಿಯಾ ಎಸ್. ಹಾವೇರಿ

info.reporterkarnataka.com

ಒಂದು ಕಡೆ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಬೀದಿ ರಂಪ ಶುರುವಾದರೆ ಇನ್ನೊಂದು ಕಡೆ ಹಾನಗಲ್ ಕ್ಷೇತ್ರದಿಂದ ಉಪ ಚುನಾವಣೆ ಸ್ಪರ್ಧಿಸಲು ಫೈಟ್ ಶುರುವಾಗಿದೆ. ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮಾಜಿ ಸಚಿವ ಸಿ.ಎಂ. ಉದಾಸೀನ ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಮನೋಹರ್ ತಹಶೀಲ್ದಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಶ್ರೀನಿವಾಸ ಮಾನೆ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಬಿಜೆಪಿಯ ಸಿ.ಎಂ. ಉದಾಸಿ ಜಯಗಳಿಸಿದ್ದರು. ಹಾಗಾಗಿ ಈ ಬಾರಿ ಇದೇ ಇಬ್ಬರು ನಾಯಕರ ನಡುವೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ.

ಬೈಎಲೆಕ್ಷನ್ ದಿನಾಂಕ ಘೋಷಣೆಗೂ ಮುನ್ನವೇ ಟಿಕೆಟ್ ಸಮರ ತಾರಕಕ್ಕೇರಿದೆ. ಮಾಜಿ ಸಚಿವ ಮನೋಹರ ತಹಶೀಲ್ದಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಒಂದು ಸುತ್ತಿನ ಸಭೆ ಕೂಡ ನಡೆಸಿದ್ದಾರೆ. ಸಭೆಯಲ್ಲಿ ಹಾನಗಲ್‌ನವರಿಗೆ ಮಾತ್ರ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದು ಪರೋಕ್ಷವಾಗಿ

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಅವರಿಗೆ ಟಿಕೆಟ್‌ ನೀಡದಂತೆ ಎಚ್ಚರಿಕೆಯಾಗಿದೆ.

ಹೊರಗಿನವರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಶ್ರಿನಿವಾಸ ಮಾನೆ, ಸೋತರೂ ಕ್ಷೇತ್ರ ಬಿಟ್ಟು ಹೋಗದೆ ಕೆಲಸ ಮಾಡುತ್ತಿದ್ದರು. ಕ್ಷೇತ್ರದಲ್ಲಿಯೇ ಮನೆ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಹೀಗಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು