5:38 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಶ್ವಾಸಕೋಶದ ಸೋಂಕು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಆಸ್ಪತ್ರೆಗೆ ದಾಖಲು; ಐಸಿಯುಲ್ಲಿ ಚಿಕಿತ್ಸೆ

25/09/2022, 21:19

ಬೆಂಗಳೂರು(reporterkarnataka.com):ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಎಸ್. ಎಂ ಕೃಷ್ಣ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರಿಗೆ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಆರೈಕೆ ನೀಡುತ್ತಿದೆ. ಶ್ವಾಸ ಕೋಶದ ಒಳಗಡೆ ಆಕ್ಸಿಜನ್ ಪ್ರಮಾಣ ಏರು ಪೇರು ಆಗ್ತ ಇದ್ದು ವೈದ್ಯರ ತಂಡ ನಿಗಾ ವಹಿಸಿದೆ.

ತೀವ್ರ ಜ್ವರದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ೧೧ ಗಂಟೆವರೆಗೂ ಅವರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಏರು ಪೇರಾದಾಗ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು