ಇತ್ತೀಚಿನ ಸುದ್ದಿ
200 ಕೋಟಿ ರೂ. ಸುಲಿಗೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮಧ್ಯಂತರ ಜಾಮೀನು
26/09/2022, 21:10

ಹೊಸದಿಲ್ಲಿ(reporterkarnataka.com) : ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ.ಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪಟಿಯಾಲ ಹೌಸ್ ನ್ಯಾಯಾಲಯವು ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜಾಕ್ವೆಲಿನ್ ಅವರ ವಕೀಲರ ಕೋರಿಕೆಯ ಮೇರೆಗೆ 50 ಸಾವಿರ ರೂ.ಗಳ ಜಾಮೀನು ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ ಬಳಿಕ ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ.