10:32 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು