10:08 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಿಜೆಪಿ ರಾಷ್ಟ್ರಾಧ್ಯಕ್ಷರ ಬದಲಾವಣೆ ಇಲ್ಲ: ಜೆ.ಪಿ. ನಡ್ಡಾ 2ನೇ ಅವಧಿಗೆ ಮುಂದುವರಿಕೆ

26/09/2022, 23:56

ಹೊಸದಿಲ್ಲಿ(reporterkarnataka.com): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ ಅವರನ್ನು 2ನೇ ಅವಧಿಗೆ ಮುಂದುವರೆಸಿ ಬಿಜೆಪಿ ಆದೇಶಿಸಿದೆ. ಈ ಮೂಲಕ ಮತ್ತೊಂದು ಅವಧಿಗೆ ಅವರನ್ನು ಮುಂದುವರಿಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು