ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಎಸ್ ಡಿಪಿಐ, ಕ್ಯಾಂಪಸ್ ಫ್ರಂಟ್ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಅಪ್ಪ- ಮಗ ವಶಕ್ಕೆ
27/09/2022, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಅಪ್ಪ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಅವರನ್ನು ವಶಕ್ಕೆ ಪಡೆದಿರುವ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಸವನಹಳ್ಳಿ ಠಾಣೆ ಪೊಲೀಸರು ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಪಿ.ಎಫ್.ಐ, ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ರಾಜ್ಯಾದ್ಯಂತ ಎನ್.ಐ.ಎ.ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ ನಡೆಸದಂತೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.