2:45 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ

27/09/2022, 14:44

ಬಂಟ್ವಾಳ(reporterkarnataka.com):
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು