5:33 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ

27/09/2022, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.   ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅವರು ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿನವರು ಬರುವ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಬರವಸೆ ನೀಡಿದ್ದಾರೆ, ಇದಕ್ಕೂ ಅವರು ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದರು. ಕೊನೆ ಹಂತದ ಪ್ರತಿಭಟನೆ ಆಗಿದ್ದರಿಂದ ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು