ಇತ್ತೀಚಿನ ಸುದ್ದಿ
ದೇಶದಲ್ಲಿ ಪಿಎಫ್‌ಐ ನಿಷೇಧ: 5 ವರ್ಷಗಳ ಕಾಲ ಬ್ಯಾನ್; ಕೇಂದ್ರ ಸರಕಾರದಿಂದ ಆದೇಶ
28/09/2022, 14:21

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಪಿಎಫ್‌ಐ ಹಾಗೂಸ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್‌ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.