12:55 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಡೆಲ್ಟಾ ಪ್ಲಸ್ ಹಾವಳಿ: ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನೆಗೆಟಿವ್ ಸರ್ಟಿಫಿಕೇಟ್ ಇದ್ದವರಿಗೆ ಮಾತ್ರ ಪ್ರವೇಶ; ಜಿಲ್ಲಾಧಿಕಾರಿ ಪರಿಶೀಲನೆ

28/06/2021, 20:55

ಮಂಗಳೂರು(reporterkarnataka news): ಕರ್ನಾಟಕ -ಕೇರಳ ಗಡಿ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ನೆಗೆಟಿವ್ ವರದಿ ಹೊಂದಿದವರು ಪ್ರವೇಶಿಸುತ್ತಿರುವ ಬಗ್ಗೆ ನಡೆಯುತ್ತಿರುವ ತಪಾಸಣೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ , ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿಗಳು, ಪಿಡಿಓ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ರಾಜ್ಯ ಸರ್ಕಾರ ಪಕ್ಕದ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವ ಹಾಗೂ ಡೆಲ್ಟಾ ಪ್ಲಸ್  ವೈರಸ್ ಕಂಡು ಬರುತ್ತಿರುವ ಹಿನ್ನೆಲೆ ಗಡಿ ಭಾಗದಿಂದ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ 24*7 ಪಾಳಿಯಲ್ಲಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಗಡಿ ಮೂಲಕ ಪ್ರವೇಶಿಸುವವರ ಕೋವಿಡ್ ನೆಗೆಟಿವ್ ವರದಿಯನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಪರೀಕ್ಷಿಸಲಿದ್ದಾರೆ, ಜಿಲ್ಲೆಗೆ  ಪ್ರವೇಶಿಸುವ ಪ್ರತಿಯೊಬ್ಬ ಕೋವಿಡ್ ನೆಗೆಟಿವ್ ವರದಿಯನ್ನು  ಹೊಂದಿ ಪ್ರವೇಶಿಸುವುದು ಕಡ್ಡಾಯ ಎಂದು ಹೇಳಿದರು.

ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ.  ತುರ್ತು ಚಿಕಿತ್ಸೆಗೆ ಬರುತ್ತಿರುವವರನ್ನು ಸಹ ಇಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದರು.

ಚೆಕ್ ಪೋಸ್ಟ್ ನಲ್ಲಿ ವಾಹನಗಳು ವೇಗವಾಗಿ ಬರುವ ಸಾಧ್ಯತೆ ಇರುವುದರಿಂದ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆಯನ್ನು ಮಾಡಬೇಕು. ತಪಾಸಣೆ ಮಾಡುತ್ತಿರುವ ಬಗ್ಗೆ ಫಲಕವನ್ನು ಸ್ವಲ್ಪ ದೂರದಲ್ಲಿ ಅಳವಡಿಸಿರುವುದರಿಂದ ವಾಹನ ಚಾಲಕರಿಗೆ ನಿಧಾನವಾಗಿ ವಾಹನ ಚಲಾಯಿಸಲು ಅನುಕೂಲವಾಗಲಿದೆ. ಆದ್ದರಿಂದ ಇದನ್ನು ಅಧಿಕಾರಿಗಳು ಅಳವಡಿಸಲು ಮುಂದಾಗಬೇಕು ಎಂದರು.  


ಚೆಕ್ ಪೋಸ್ ನಲ್ಲಿ ಹೆಚ್ಚಿನ ಪೊಲೀಸ್, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಿದ ಅವರು, ಜಿಲ್ಲೆಯಲ್ಲಿ ಗಡಿ ಭಾಗದ ರಸ್ತೆಗಳಾದ ನೆಟ್ಟಣಿಕೆ ಮುಡ್ನೂರು, ಜಾಲ್ಸೂರು, ಸಾರಡ್ಕ ಸೇರಿದಂತೆ ಮತ್ತಿತರ ಗಡಿಗಳಲ್ಲಿ ಹಾಗೂ ಕೇರಳದ ಗಡಿಯ ಗ್ರಾಮೀಣ ರಸ್ತೆಗಳಲ್ಲಿ ಹೆಚ್ಚು ಜನರು ಸಂಚರಿಸುವ ರಸ್ತೆಗಳಿಗೂ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗುವುದು ಎಂದರು. 

ಇತ್ತೀಚಿನ ಸುದ್ದಿ

ಜಾಹೀರಾತು