11:23 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ; ಕೇಸು ದಾಖಲು

30/09/2022, 09:46

ಸುಳ್ಯ(reporterkarnataka.com): ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಆಕೆ ಗರ್ಭವತಿಯಾದ ಬಳಿಕ ಬೆಳಕಿಗೆ ಬಂದಿದ್ದು,  ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ಸುಳ್ಯದಲ್ಲಿ ನಡೆದಿದೆ.

ಆರೋಪಿಯನ್ನು ಸುಳ್ಯ ತಾಲೂಕಿನ ಉಬರಡ್ಕ ನಿವಾಸಿ ತೀರ್ಥಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆ ಬೆಳೆಸಿ ದೈಹಿಕ ಸಂಪರ್ಕ ನಡೆಸಿದ್ದಾನೆ ಎನ್ನಲಾಗಿದ್ದು, ಬಾಲಕಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಾಟ್ಸಪ್ ಗ್ರೂಪ್ ಒಂದರಲ್ಲಿ ಆರೋಪಿ ತೀರ್ಥಪ್ರಸಾದ್ ಹಾಗೂ ಅಪ್ರಾಪ್ತ ಬಾಲಕಿ ಪರಸ್ಪರ ಪರಿಚಯವಾಗಿದ್ದು, ಬಾಲಕಿಯೊಂದಿಗೆ ಸಲುಗೆ ಬೆಳೆಸಿದ ಆರೋಪಿ ಆಕೆಯನ್ನು ಸುಳ್ಯಕ್ಕೆ ಕರೆಸಿಕೊಂಡಿದ್ದಾನೆ. ಸುಳ್ಯಕ್ಕೆ ಬಂದ ಬಾಲಕಿಯನ್ನು ಕರೆದುಕೊಂಡು ಸ್ನೇಹಿತನ ರೂಮ್ ಗೆ ತೆರಳಿ ಅಲ್ಲಿ ಆಕೆಯ ಜೊತೆ ದೈಹಿಕ ಸಂಪರ್ಕದಲ್ಲೇರ್ಪಟ್ಟಿದ್ದಾನೆ ಎನ್ನಲಾಗಿದೆ.

ಈ ವಿಚಾರವನ್ನು ಯಾರಲ್ಲಿಯೂ ಹೇಳದೆ ಮುಚ್ಚಿಟ್ಟಿದ್ದ ಬಾಲಕಿಗೆ ಕಳೆದ ತಿಂಗಳಿನನಿಂದ ವಿಪರೀತ ಹೊಟ್ಟೆನೋವು ಪ್ರಾರಂಭವಾಗಿದ್ದು, ಪೋಷಕರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಗರ್ಭಿಣಿ ಎನ್ನುವುದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು