2:06 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು